ADVERTISEMENT

ಮಣಿಪುರ | ಚುನಾಯಿತ ಪ್ರತಿನಿಧಿಗಳ ಆಸ್ತಿಪಾಸ್ತಿಗೆ ಹಾನಿ; 7 ಮಂದಿಯ ಬಂಧನ

ಪಿಟಿಐ
Published 22 ನವೆಂಬರ್ 2024, 4:33 IST
Last Updated 22 ನವೆಂಬರ್ 2024, 4:33 IST
<div class="paragraphs"><p>ಮಣಿಪುರ ಸಂಘರ್ಷ</p></div>

ಮಣಿಪುರ ಸಂಘರ್ಷ

   

– ಪ್ರಾತಿನಿಧಿಕ ಚಿತ್ರ

ಇಂಫಾಲ: ಮಣಿಪುರದಲ್ಲಿ ಚುನಾಯಿತ ಪ್ರತಿನಿಧಿಗಳ ಆಸ್ತಿಪಾಸ್ತಿಗೆ ಹಾನಿಯನ್ನುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ತನಿಖೆ ಪ್ರಗತಿಯಲ್ಲಿದ್ದು, ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 16ರಂದು ನಾಪತ್ತೆಯಾಗಿದ್ದ ಆರು ಮಂದಿಯ ಮೃತದೇಹಗಳು ಪತ್ತೆಯಾದ ಬೆನ್ನಲ್ಲೇ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದರು.

ಈ ಮೊದಲು ಶಾಸಕರು, ಸಚಿವರ ನಿವಾಸಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 25 ಮಂದಿಯನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಮಾಯಕರ ಹತ್ಯೆಯಿಂದ ಆಕ್ರೋಶಗೊಂಡ ಜನರು ಶಾಸಕರು, ಸಚಿವರ ಮನೆಗಳಿಗೆ ಬೆಂಕಿ ಹಚ್ಚಿದ್ದರು. ಬಳಿಕ ಕರ್ಫ್ಯೂ ಹೇರಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.