ಇಂಫಾಲ್: ಮಣಿಪುರದ ವಿವಿಧೆಡೆ ಆಂತರಿಕವಾಗಿ ಸ್ಥಳಾಂತರಗೊಂಡ 1000 ಮಂದಿಯ ನೆರವಿಗೆ ರಾಜ್ಯ ಸರ್ಕಾರ ಸುಮಾರು ₹5 ಕೋಟಿ ಬಿಡುಗಡೆ ಮಾಡಿದೆ. ನಿತ್ಯದ ಅಗತ್ಯದ ವಸ್ತುಗಳನ್ನು ಒದಗಿಸುವ ಹಣವೂ ಇದರಲ್ಲಿ ಒಳಗೊಂಡಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಫೇಸ್‌ಬುಕ್‌ನಲ್ಲಿ, ‘ಸ್ಥಳಾಂತರಗೊಂಡ 1000 ಜನರಿಗಾಗಿ ಹಣ ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.
ದೀಪಾವಳಿ ಮತ್ತು ನಿಂಗೋಲ್ ಚಕ್ಕೋಬ ಹಬ್ಬದ ಒಳಗಾಗಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಇದಕ್ಕೂ ಮೊದಲು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.