ADVERTISEMENT

Manipur violence: ದೆಹಲಿಯಲ್ಲಿ ಮೈತೇಯಿ, ಕುಕಿ, ನಾಗಾ ಸಮುದಾಯದ ಶಾಸಕರ ಸಭೆ ​

ಪಿಟಿಐ
Published 15 ಅಕ್ಟೋಬರ್ 2024, 5:51 IST
Last Updated 15 ಅಕ್ಟೋಬರ್ 2024, 5:51 IST
<div class="paragraphs"><p>ಮಣಿಪುರದಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳು</p></div>

ಮಣಿಪುರದಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳು

   

(ರಾಯಿಟರ್ಸ್ ಚಿತ್ರ) 

ನವದೆಹಲಿ: ಸಂರ್ಘಷ ಪೀಡಿತ ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸುವ ಉದ್ದೇಶದಿಂದ ಮೈತೇಯಿ, ಕುಕಿ ಹಾಗೂ ನಾಗಾ ಸಮುದಾಯಗಳಿಗೆ ಸೇರಿದ ಶಾಸಕರು ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ಸಭೆ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

17 ತಿಂಗಳ ಹಿಂದೆ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ನಡೆಯುತ್ತಿರುವ ಸಂಘರ್ಷಕ್ಕೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನವಾಗಿ ಗೃಹ ವ್ಯವಹಾರಗಳ ಸಚಿವಾಲಯ ಈ ಸಭೆಯನ್ನು ಕರೆದಿದೆ.

ಸಭೆಗೆ ಮೈತೇಯಿ ಸಮುದಾಯದಿಂದ ವಿಧಾನಸಭೆ ಸ್ಪೀಕರ್ ಟಿ. ಸತ್ಯವ್ರತ ಸಿಂಗ್ ಮತ್ತು ಶಾಸಕ ತೊಂಗಮ್ ಬಿಸ್ವಜಿತ್ ಸಿಂಗ್, ಕುಕಿ ಸಮುದಾಯದಿಂದ ಲೆಟ್ಪಾವೊ ಹಾಕಿಪ್ ಮತ್ತು ನೆಮ್ಚಾ ಕಿಪ್ಗೆನ್ (ಇಬ್ಬರೂ ರಾಜ್ಯ ಸಚಿವರು) ಹಾಗೂ ನಾಗಾ ಸಮುದಾಯದಿಂದ ಶಾಸಕರಾದ ರಾಮ್ ಮುಯಿವಾ, ಅವಾಂಗ್‌ಬೋ ನ್ಯೂಮೈ ಮತ್ತು ಎಲ್ ದಿಖೋ ಭಾಗಿಯಾಗಿದ್ದಾರೆ.

ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಸಭೆಯಲ್ಲಿ ಭಾಗಿಯಾಗಿಲ್ಲ .

ಮಣಿಪುರದಲ್ಲಿ ಶಾಂತಿ ನೆಲೆಸಲು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಮಾತುಕತೆ ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ ಸುಮಾರು ಒಂದು ತಿಂಗಳ ಬಳಿಕ ಈ ಸಭೆ ನಡೆಯುತ್ತಿದೆ. ಕೇಂದ್ರವು ಎರಡೂ ಸಮುದಾಯಗಳೊಂದಿಗೆ ಚರ್ಚೆ ನಡೆಸುತ್ತಿದೆ.

2023ರ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಸಂಘರ್ಷ ಭುಗಿಲೆದ್ದ ಬಳಿಕ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.