ADVERTISEMENT

ಮಣಿಪುರ:ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ 23 ಬಿಜೆಪಿ ಶಾಸಕರ ಸಹಿ

ಪಿಟಿಐ
Published 12 ಸೆಪ್ಟೆಂಬರ್ 2023, 5:23 IST
Last Updated 12 ಸೆಪ್ಟೆಂಬರ್ 2023, 5:23 IST
<div class="paragraphs"><p>ಮಣಿಪುರದಲ್ಲಿ ಶಾಂತಿಗಾಗಿ ಪ್ರಾರ್ಥನೆ</p></div>

ಮಣಿಪುರದಲ್ಲಿ ಶಾಂತಿಗಾಗಿ ಪ್ರಾರ್ಥನೆ

   

(ಪಿಟಿಐ ಸಂಗ್ರಹ ಚಿತ್ರ)

ಇಂಫಾಲ್: ಮಣಿಪುರದ ಆಡಳಿತರೂಢ ಬಿಜೆಪಿ ಸರ್ಕಾರದ 23 ಶಾಸಕರು ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.

ADVERTISEMENT

ಈ ಮೂಲಕ ಹಿಂಸಾಚಾರ ಪೀಡಿತ ಕಣಿವೆ ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡಲು ಪ್ರತಿಜ್ಞೆ ಮಾಡಿದ್ದಾರೆ.

ಕುತೂಹಲವೆಂಬಂತೆ, ಸಹಿ ಮಾಡಿದ ಶಾಸಕರ ಪಟ್ಟಿಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೆಸರು ಇಲ್ಲ ಎಂದು ತಿಳಿದು ಬಂದಿದೆ.

ಬಿಕ್ಕಟ್ಟಿಗೆ ಆದಷ್ಟು ಬೇಗ ಪರಿಹಾರಕ್ಕಾಗಿ ಕೇಂದ್ರ ನಾಯಕತ್ವವನ್ನು ಮನವೊಲಿಸಲು ಶಾಸಕರ ನಿಯೋಗವು ಶೀಘ್ರದಲ್ಲೇ ದೆಹಲಿಗೆ ತೆರಳುವುದನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.

ಮಣಿಪುರದ ಪ್ರಾದೇಶಿಕ ಸಮಗ್ರತೆ ಪರವಾಗಿ ನಾವು ನಿಲ್ಲುತ್ತೇವೆ. ಯಾವುದೇ ಪ್ರತ್ಯೇಕ ಆಡಳಿತವನ್ನು ಒಪ್ಪುವುದಿಲ್ಲ ಎಂದು ಶಾಸಕರು ಸರ್ವಾನುಮತದಿಂದ ಒಪ್ಪಿ ಅಂಗೀಕರಿಸಿದ್ದಾಗಿ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಕುಕಿ ಸಮುದಾಯದ ಪ್ರತ್ಯೇಕ ಆಡಳಿತ ಬೇಡಿಕೆಯನ್ನು ವಿರೋಧಿಸಲಾಗಿದೆ.

ಮೇ 3ರಂದು ಆರಂಭವಾಗಿರುವ ಮಣಿಪುರ ಹಿಂಸಾಚಾರದಲ್ಲಿ ಈವರೆಗೆ 160ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.