ಗುವಾಹಟಿ: ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ ಗಲಭೆಗೆ ಕಾರಣವಾಗಿದೆ.ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿ ಕಚೇರಿಗಳ ಮೇಲೆ ಭಾನುವಾರ ದಾಳಿ ನಡೆಸಿದ್ದಾರೆ ಎಂದು ‘ಎನ್‌ಡಿಟಿವಿ’ ವರದಿ
ಮಾಡಿದೆ.
ಫಲಕಗಳನ್ನು ಹಿಡಿದು ಬೀದಿಗಿಳಿದ ಪ್ರತಿಭಟನಕಾರರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್ ಅವರ ಪ್ರತಿಕೃತಿ ದಹಿಸಿದ್ದಾರೆ. ಇಂಫಾಲದ ಬಿಜೆಪಿ ಕೇಂದ್ರ ಕಚೇರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಟಿಕೆಟ್ ಆಕಾಂಕ್ಷಿಗಳಾಗಿದ್ದ ಕೆಲವು ಮುಖಂಡರು ಪಕ್ಷದ ಮೇಲೆ ಮುನಿಸಿಕೊಂಡಿದ್ದು, ರಾಜೀನಾಮೆ ನೀಡಿದ್ದಾರೆ. ಆದರೆ ರಾಜೀನಾಮೆ ನೀಡಿದವರ ಸಂಖ್ಯೆ ಎಷ್ಟು ಎಂಬುದು ಖಚಿತಪಟ್ಟಿಲ್ಲ.ಮೂಲಗಳ ಪ್ರಕಾರ, ಕಾಂಗ್ರೆಸ್‌ನಿಂದ ಪಕ್ಷಾಂತರ ಆಗಿರುವ ಮುಖಂಡರಿಗೆ ಅವಕಾಶ ಕಲ್ಪಿಸಿದ್ದರಿಂದ, ಮೂಲ ಬಿಜೆಪಿಯಲ್ಲಿದ್ದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ 10 ಜನರಿಗೆ ಬಿಜೆಪಿ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.