ADVERTISEMENT

Manipur Violence | ಮೈತೇಯಿ ಸಮುದಾಯದ ವ್ಯಕ್ತಿ ನಾಪತ್ತೆ, ಮತ್ತೆ ಉದ್ವಿಗ್ನ

ಪಿಟಿಐ
Published 26 ನವೆಂಬರ್ 2024, 12:54 IST
Last Updated 26 ನವೆಂಬರ್ 2024, 12:54 IST
<div class="paragraphs"><p>ಮಣಿಪುರದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿ </p></div>

ಮಣಿಪುರದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಸಿಬ್ಬಂದಿ

   

–ಪಿಟಿಐ ಚಿತ್ರ

ಇಂಫಾಲ್: ಇಂಫಾಲ್ ಪಶ್ಚಿಮ ಜಿಲ್ಲೆಯ ಕಾಂಗ್‌ಪೊಕ್ಪಿಯ ಗಡಿಯಲ್ಲಿ ಮೈತೇಯಿ ಸಮುದಾಯಕ್ಕೆ ಸೇರಿದ 55 ವರ್ಷದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇಂಫಾಲ್ ಪಶ್ಚಿಮದ ಲೊಯಿಟಾಂಗ್ ಖುನೌ ಗ್ರಾಮದ ನಿವಾಸಿ ಕಮಲಬಾಬು ಸಿಂಗ್ ಅವರು ಸೋಮವಾರ ಮಧ್ಯಾಹ್ನ ಕಾಂಗ್‌ಪೊಕ್ಪಿಯ ಲೀಮಾಖೋಂಗ್ ಸೇನಾ ಶಿಬಿರದಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ್ಟಿದ್ದರು. ಆದರೆ, ಇದುವರೆಗೆ ಮನೆಗೆ ಹಿಂತಿರುಗಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇಂಫಾಲ್‌ನಿಂದ 16 ಕಿ.ಮೀ. ದೂರದಲ್ಲಿರುವ ಲೀಮಾಖೋಂಗ್ ಸೇನಾ ಶಿಬಿರದಲ್ಲಿ ಸಿಂಗ್ ಕೆಲಸ ಮಾಡುತ್ತಿದ್ದರು. ಇದು ಕುಕಿ ಪ್ರಾಬಲ್ಯವಿರುವ ಪ್ರದೇಶವಾಗಿದೆ ಎಂದು ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಕಮಲಬಾಬು ಸಿಂಗ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆತನಿಗಾಗಿ ಪೊಲೀಸರು ಮತ್ತು ಸೇನೆ ಜಂಟಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಜಿರೀಬಾಮ್‌ ಜಿಲ್ಲೆಯಲ್ಲಿ ಬಂಡುಕೋರರು ಮೂವರು ಮಹಿಳೆಯರು ಮತ್ತು ಶಿಶುಗಳ ಹತ್ಯೆ ಮಾಡಿದ್ದರಿಂದ ಆಕ್ರೋಶಗೊಂಡ ಜನರು ನಡೆಸಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಕುಪಿತಗೊಂಡ ಜನರ ಗುಂಪು ಬಿಜೆಪಿಯ ಮೂವರು ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿತ್ತು. ಅದರಲ್ಲಿ ಒಬ್ಬರು ಸಚಿವರ ಮನೆಯೂ ಸೇರಿದೆ. ಕಾಂಗ್ರೆಸ್‌ನ ಶಾಸಕರೊಬ್ಬರ ಮನೆಗೂ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಶಾಸಕರ ಮನೆಯಲ್ಲಿ ಯಾರೂ ಇರಲಿಲ್ಲ.

ಮಣಿಪುರ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರ ಪೂರ್ವಜರ ಮನೆಗೆ ಪ್ರತಿಭಟನಕಾರರ ಗುಂಪು ನುಗ್ಗಲು ಯತ್ನಿಸಿದರೂ ಭದ್ರತಾ ಪಡೆಗಳು ಈ ಪ್ರಯತ್ನವನ್ನು ವಿಫಲಗೊಳಿಸಿತ್ತು.

ಗಲಭೆ ಪೀಡಿತ ಜಿಲ್ಲೆಗಳಾದ ಇಂಫಾಲ್‌ ಪಶ್ಚಿಮ, ಇಂಫಾಲ್‌ ಪೂರ್ವ, ಬಿಷ್ಣುಪುರ್, ತೌಬಲ್, ಕಾಕ್‌ಚಿಂಗ್, ಕಾಂಗ್‌ಪೋಕ್ಪಿ, ಚುರಾಚಾಂದ್‌ಪುರ ವ್ಯಾಪ್ತಿಯಲ್ಲಿ ಎರಡು ದಿನ ಇಂಟರ್‌ನೆಟ್ ಸೇವೆಯನ್ನು ಸರ್ಕಾರ ರದ್ದುಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.