ADVERTISEMENT

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮನೀಶ್ ತಿವಾರಿ, ಕಮಲ ನಾಥ್ ಸ್ಪರ್ಧೆ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಸೆಪ್ಟೆಂಬರ್ 2022, 11:07 IST
Last Updated 22 ಸೆಪ್ಟೆಂಬರ್ 2022, 11:07 IST
ಮನೀಶ್ ತಿವಾರಿ
ಮನೀಶ್ ತಿವಾರಿ   

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ಮನೀಶ್ ತಿವಾರಿ ಹಾಗೂ ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ ನಾಥ್ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಉಮೇದುವಾರಿಕೆಗೆ ಪ್ರದೇಶ ಕಾಂಗ್ರೆಸ್ ಸಮಿತಿಯ 10 ಪ್ರತಿನಿಧಿಗಳ ಬೆಂಬಲದ ಅಗತ್ಯವಿದೆ.

ಪಕ್ಷದ ಸಂಘಟನೆಯಲ್ಲಿ ಸುಧಾರಣೆಗೆ ಸಲಹೆ ನೀಡಿದ ನಾಯಕರಲ್ಲಿ ತಿವಾರಿ ಒಬ್ಬರಾಗಿದ್ದಾರೆ.

ADVERTISEMENT

ಈಗ ತಿವಾರಿ ಹಾಗೂ ಕಮನ ನಾಥ್ ಕೂಡ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಕಠಿಣ ಸ್ಪರ್ಧೆ ಏರ್ಪಡುವ ನಿರೀಕ್ಷೆಯಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಲಾಗಿದೆ. ಸೆಪ್ಟೆಂಬರ್ 24ರಿಂದ 30ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಅ. 8 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಂದೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಹೊರಬೀಳಲಿದೆ.

ಹಿರಿಯ ನಾಯಕರಾದ ಅಶೋಕ್ ಗೆಹಲೋತ್ ಹಾಗೂ ಶಶಿ ತರೂರ್ ಕಾಂಗ್ರಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ. ಸುರೇಶ್ ಪಚೌರಿ, ಮುಕುಲ್ ವಾಸ್ನಿಕ್ ಹಾಗೂ ಪವನ್ ಬನ್ಸಾಲ್ ಹೆಸರುಗಳು ಸಹ ಕೇಳಿ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.