ADVERTISEMENT

ಜನರ ಹಿತ ಬಯಸುವ ನೀತಿಗಳನ್ನು ಸರ್ಕಾರ ರೂಪಿಸುತ್ತಿಲ್ಲ: ಮನಮೋಹನ್ ಸಿಂಗ್

ಏಜೆನ್ಸೀಸ್
Published 17 ಅಕ್ಟೋಬರ್ 2019, 9:40 IST
Last Updated 17 ಅಕ್ಟೋಬರ್ 2019, 9:40 IST
ಮನಮೋಹನ್  ಸಿಂಗ್
ಮನಮೋಹನ್ ಸಿಂಗ್   

ನವದೆಹಲಿ: ಕೇಂದ್ರ ಮತ್ತು ಮಹಾರಾಷ್ಟ್ರಸರ್ಕಾರ ಜನರ ಹಿತ ಬಯಸುವ ನೀತಿಗಳನ್ನು ರೂಪಿಸುವುದಿಲ್ಲ. ಕೇಂದ್ರ ಸರ್ಕಾರ ಯಾವ ರೀತಿ ನಿರಾಸಕ್ತಿ ವಹಿಸಿದೆ ಎಂಬುದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತ್ರಿಕಾ ಪ್ರಕಟಣೆಯಲ್ಲಿ ಕಾಣಿಸುತ್ತದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಂಗ್, ಆರ್ಥಿಕತೆಯನ್ನು ಸರಿಪಡಿಸುವ ಮುನ್ನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದೇ ಇದ್ದಾಗ ಸರ್ಕಾರ ವಿಪಕ್ಷವನ್ನು ದೂರುತ್ತದೆ ಎಂದಿದ್ದಾರೆ.

ಸುದ್ದಿಗೋಷ್ಠಿಯ ಮುಖ್ಯಾಂಶಗಳು

ADVERTISEMENT

* ಮುಂದಿನ ತಿಂಗಳು ಸಂಸತ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಅದಕ್ಕಿಂತ ಮುನ್ನ ಪಿಎಂಸಿ ಬ್ಯಾಂಕ್ ಬಿಕ್ಕಟ್ಟು ಪರಿಹಾರವಾಗಬಹುದು ಎಂದು ಭಾವಿಸುತ್ತೇನೆ. ಪ್ರಧಾನಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ವಿತ್ತ ಸಚಿವರು ಇದಕ್ಕೆ ಪರಿಹಾರ ಕಂಡುಕೊಳ್ಳಲು ಯತ್ನಿಸಬೇಕು.

*ಉದ್ಯೋಗ ಸೃಷ್ಟಿ ಮಾಡಬೇಕಿದೆ. ದೇಶದ ಆರ್ಥಿಕತೆ ಬೆಳವಣಿಗೆಗಾಗಿ ಉದ್ಯಮಗಳನ್ನು ಪ್ರೋತ್ಸಾಹಿಸಬೇಕು. ಕುಸಿದಿರುವ ಆರ್ಥಿಕತೆಯನ್ನು ಸರಿಮಾಡಬೇಕಾದರ ಸಮಯ ಹಿಡಿಸುತ್ತದೆ. ಕಾಂಗ್ರೆಸ್-ಎನ್‌ಸಿಪಿ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲವೂ ಸರಿಹೋಗುತ್ತದೆ.

*ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಮಹಾರಾಷ್ಟ್ರದಲ್ಲಿನ ಉತ್ಪಾದನಾ ವಲಯದಲ್ಲಿ ಕುಸಿತ ಕಂಡು ಬಂದಿದೆ. ಆರ್ಥಿಕ ಹಿಂಜರಿತದಿಂದ ರಾಜ್ಯ ಸಂಕಷ್ಟ ಅನುಭವಿಸುತ್ತಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ.

*ಮಹಾರಾಷ್ಟ್ರದಲ್ಲಿ ಅವಕಾಶಗಳ ಕೊರತೆ ಇದೆ. ಮೂರರಲ್ಲಿಒಬ್ಬರಿಗೆ ಇಲ್ಲಿ ಉದ್ಯೋಗವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿಯೂ ಸಮಸ್ಯೆ ಇದೆ. ವಲಸಿಗರ ಸಂಖ್ಯೆ ಜಾಸ್ತಿಯಾಗುತ್ತಿದೆ. ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ನಂಬರ್ 1 ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.