ADVERTISEMENT

ಪ್ರಯಾಣಿಕನಿಗೆ ಅಮಾನುಷವಾಗಿ ಥಳಿಸಿದ ರೈಲ್ವೆ ಪೊಲೀಸ್: ಲಾಠಿ ಏಟಿಗೆ ಹೊರಬಂತು ಕರುಳು

ಪಿಟಿಐ
Published 27 ಜುಲೈ 2024, 12:55 IST
Last Updated 27 ಜುಲೈ 2024, 12:55 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಸಮಸ್ತಿಪುರ (ಬಿಹಾರ): ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪ್ರಯಾಣಿಕರೊಬ್ಬರಿಗೆ ರೈಲ್ವೆ ಪೊಲೀಸ್ ಸಿಬ್ಬಂದಿ ಅಮಾನುಷವಾಗಿ ಥಳಿಸಿರುವ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಯಿಂದಾಗಿ ಪ್ರಯಾಣಿಕನಿಗೆ ಹಾಕಲಾಗಿದ್ದ ಶಸ್ತ್ರಚಿಕಿತ್ಸೆಯ ಹೊಲಿಗೆಗಳು ಛಿದ್ರಗೊಂಡಿದ್ದು, ಕರುಳು ಹೊರಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಮುಂಬೈಗೆ ತೆರಳುವ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ಸಂಭವಿಸಿದೆ. ರೈಲಿನಲ್ಲಿ ಆಸನಗಳ ವಿಚಾರವಾಗಿ ಪ್ರಯಾಣಿಕರ ನಡುವೆ ತೀವ್ರ ವಾಗ್ವಾದ ನಡೆಯುತಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿ ರೈಲ್ವೆ ಪೊಲೀಸ್ ಸಿಬ್ಬಂದಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಆರಂಭದಲ್ಲಿ ವಾಗ್ವಾದ ನಡೆಸುತ್ತಿದ್ದ ಪ್ರಯಾಣಿಕರನ್ನು ಚದುರಿಸಲು ರೈಲ್ವೆ ಸಿಬ್ಬಂದಿ ಮುಂದಾಗಿದ್ದರು. ಆದರೆ, ಮಾತಿನ ಚಕಮಕಿಯಿಂದಾಗಿ ಪ್ರಯಾಣಿಕರೇ ರೈಲ್ವೆ ಸಿಬ್ಬಂದಿಯನ್ನು ಥಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ರೈಲ್ವೆ ಸಿಬ್ಬಂದಿ ಮನಸೋಇಚ್ಛೆ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗಾಯಗೊಂಡ ಪ್ರಯಾಣಿಕನನ್ನು ಮೊಹಮದ್ ಫುರ್ಕಾನ್ ಎಂದು ಗುರುತಿಸಲಾಗಿದೆ. ಈತ ಕೆಲವು ದಿನಗಳ ಹಿಂದೆ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರೈಲ್ವೆ ಸಿಬ್ಬಂದಿಯು ಫುರ್ಕಾನ್ ಅವರ ಹೊಲಿಗೆ ಹಾಕಿರುವ ಗಾಯದ ಮೇಲೆ ಲಾಠಿಯಿಂದ ಹೊಡೆದಿದ್ದರಿಂದ ಕರುಳು ಹೊರಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಬಂಧ ಈಗಾಗಲೇ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮುಜಾಫರ್‌ಪುರ ಪೊಲೀಸ್ ಅಧಿಕಾರಿ ಗೌರವ್ ಮಂಗಳಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.