ಸೂರತ್: ಗುಜರಾತ್‌ನ ಸೂರತ್‌ನಲ್ಲಿ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಮಂದಿ ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಸಾಯನಿಕ ಉತ್ಪಾದನಾ ಘಟಕಕ್ಕೆ ಬೆಂಕಿ ಹೊತ್ತಿಕೊಂಡ ಒಂದು ದಿನದ ನಂತರ ನಾಪತ್ತೆಯಾಗಿದ್ದ ಏಳು ಮಂದಿ ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಚಿನ್ ಇಂಡಸ್ಟ್ರೀಯಲ್ ಪ್ರದೇಶದಲ್ಲಿ ರಾಸಾಯನಿಕ ಘಟಕದಲ್ಲಿ ಮಂಗಳವಾರ ಮಧ್ಯರಾತ್ರಿ ಘಟನೆ ನಡೆದಿತ್ತು. ರಾಸಾಯನಿಕ ಸೋರಿಕೆಯಿಂದಾಗಿ ಸ್ಟೋರೆಜ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು 15 ಅಗ್ನಿಶಾಮಕ ವಾಹನಗಳು ಒಂಬತ್ತು ತಾಸುಗಳ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಬುಧವಾರ ಬೆಳಿಗ್ಗೆ 11ರ ಹೊತ್ತಿಗೆ ಬೆಂಕಿ ನಿಯಂತ್ರಣಕ್ಕೆ ಬಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.