ಸಿವಾನ್: ಬಿಹಾರದ ಸಿವಾನ್ ಜಿಲ್ಲೆಯ ಭೋಪತ್‌ಪುರದಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ಮೂರು ಮಂದಿ ಮೃತಪಟ್ಟಿದ್ದು, ಏಳು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ವಾಕರಿಕೆ, ಹೊಟ್ಟೆನೋವು ಮತ್ತು ತಲೆತಿರುಗುವಿಕೆಯಿಂದ ಬಳಲುತ್ತಿದ್ದ 10 ಮಂದಿಯನ್ನು ಸಿವಾನ್‌ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪೈಕಿ ಇಬ್ಬರನ್ನು ಪಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.
ಅಸ್ವಸ್ಥರಲ್ಲಿ ಹಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಜಿಲ್ಲಾಡಳಿತವು ತಿಳಿಸಿದೆ.
2016 ಏಪ್ರಿಲ್‌ನಲ್ಲಿ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ, ಕಳ್ಳಭಟ್ಟಿ ಸೇವಿಸಿ 50 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.