ADVERTISEMENT

ಪಶ್ಚಿಮ ಬಂಗಾಳ | ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ, 6 ಮಂದಿ ಸಾವು

ಪಿಟಿಐ
Published 7 ಮೇ 2024, 3:05 IST
Last Updated 7 ಮೇ 2024, 3:05 IST
<div class="paragraphs"><p>ಸಂಗ್ರಹ ಚಿತ್ರ</p></div>

ಸಂಗ್ರಹ ಚಿತ್ರ

   

ಕೋಲತ್ತ: ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಡಿಯಾ, ಪುರುಲಿಯಾ ಮತ್ತು ಪುರ್ಬಾ ಬರ್ಧಮಾನ್ ಜಿಲ್ಲೆ ಸೇರಿದಂತೆ ದಕ್ಷಿಣ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ( ಸೋಮವಾರ) ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ದಂಪತಿ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಿಗೆ ಸಂಪರ್ಕಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಪ್ರತಿಕೂಲ ಹವಮಾನದಿಂದಾಗಿ ಕೊಲ್ಕತ್ತಗೆ ತೆರಳಬೇಕಿದ್ದ ಹಲವು ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮೂಲಗಳು ತಿಳಿಸಿವೆ.

ಈ ಭಾಗಗಳಲ್ಲಿ ಮೇ 10ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.