ಜೈಪುರ: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಬಸ್ವೊಂದು ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಮೃತಪಟ್ಟಿದ್ದು, 36ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಲಾಸರ್ನಿಂದ ಲಕ್ಷ್ಮಣಗಢಕ್ಕೆ ಬರುತ್ತಿದ್ದ ಖಾಸಗಿ ಬಸ್ವೊಂದು ತಿರುವು ತೆಗೆದುಕೊಳ್ಳುವಾಗ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಲಕ್ಷ್ಮಣಗಢ ಮತ್ತು ಸಿಕರ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಯಾದವ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.