ADVERTISEMENT

ಉತ್ತರ ಪ್ರದೇಶ | ಬುಲಂದ್‌ಶಹರ್‌ನಲ್ಲಿ ಸಿಲಿಂಡರ್ ಸ್ಫೋಟ: 5 ಮಂದಿ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 2:35 IST
Last Updated 22 ಅಕ್ಟೋಬರ್ 2024, 2:35 IST
<div class="paragraphs"><p> ಸಿಲಿಂಡರ್ ಸ್ಫೋಟದ ದೃಶ್ಯ (ಸಾಂದರ್ಭಿಕ ಚಿತ್ರ)</p></div>

ಸಿಲಿಂಡರ್ ಸ್ಫೋಟದ ದೃಶ್ಯ (ಸಾಂದರ್ಭಿಕ ಚಿತ್ರ)

   

ಲಖನೌ: ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯಲ್ಲಿರುವ ರಿಯಾಜುದ್ದೀನ್ ಎಂಬುವವರ ಮನೆಯಲ್ಲಿ 19 ಮಂದಿ ವಾಸಿಸುತ್ತಿದ್ದರು. ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ಮನೆ ಕುಸಿದು ಬಿದ್ದಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಬುಲಂದ್‌ಶಹರ್‌ನ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್ ಚಂದ್ರಪ್ರಕಾಶ್ ಸಿಂಗ್ ತಿಳಿಸಿದ್ದಾರೆ.

ADVERTISEMENT

‘ಈವರೆಗೆ ಐದು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್, ವೈದ್ಯಕೀಯ ಮತ್ತು ಸ್ಥಳೀಯ ಆಡಳಿತದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.