ADVERTISEMENT

ತೆಲಂಗಾಣ | ಮಳೆ, ಪ್ರವಾಹದಲ್ಲಿ 29 ಮಂದಿ ಸಾವು

ಪಿಟಿಐ
Published 7 ಸೆಪ್ಟೆಂಬರ್ 2024, 13:42 IST
Last Updated 7 ಸೆಪ್ಟೆಂಬರ್ 2024, 13:42 IST
<div class="paragraphs"><p>ಹೈದರಾಬಾದ್‌ನಲ್ಲಿ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿರುವ ರಸ್ತೆ</p></div>

ಹೈದರಾಬಾದ್‌ನಲ್ಲಿ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿರುವ ರಸ್ತೆ

   

ಪಿಟಿಐ ಚಿತ್ರ

ಹೈದರಾಬಾದ್: ತೆಲಂಗಾಣದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಲ್ಲಿ 29 ಮಂದಿ ‌ಮೃತಪಟ್ಟಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಆಗಸ್ಟ್‌ 31 ರಿಂದ ಸೆಪ್ಟೆಂಬರ್‌ 3ರ ನಡುವೆ ದಾಖಲಾದ ಮಳೆಯ ಆಧಾರದ ಮೇಲೆ ರಾಜ್ಯದ 33 ಜಿಲ್ಲೆಗಳ ಪೈಕಿ 29 ಜಿಲ್ಲೆಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂತಿ ಕುಮಾರಿ ತಿಳಿಸಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ತಲಾ ₹3 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾರಿ ಮಳೆ ಮತ್ತು ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿ ಕುರಿತು ಸೋಮವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ ಮತ್ತು ಪ್ರವಾಹದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು. ಮೃತಪಟ್ಟ 29 ಜನರ ವಿವರಗಳನ್ನು ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕುಮಾರಿ ತಿಳಿಸಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಮತ್ತು ಪುನರ್ವಸತಿ ಒದಗಿಸುವ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ ಅವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಾಥಮಿಕ ವರದಿ ಪ್ರಕಾರ, ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದಲ್ಲಿ ಈವರೆಗೆ ₹5,438 ಕೋಟಿ ನಷ್ಟ ಅಂದಾಜಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.