ಖಾರ್ಗೋನೆ/ಮೊರೆನಾ: ಮಧ್ಯಪ್ರದೇಶದ ಖಾರ್ಗೋನೆ ಮತ್ತು ಮೊರೆನಾ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಇಂದು (ಭಾನುವಾರ) ಬೆಳಿಗ್ಗೆ 7 ಗಂಟೆ ಸುಮಾರಿಗೆ ಖಾರ್ಗೋನೆ ನಗರದ ಪಿಡಬ್ಲೂಡಿ ಕಚೇರಿ ಬಳಿ ಕ್ರೀಡಾ ಬಳಕೆಯ ವಾಹನ (ಎಸ್‌ಯುವಿ) ಮತ್ತು ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ವ್ಯಾನ್‌ನಲ್ಲಿದ್ದ ರಾಮಲಾಲ್ (50) ಮತ್ತು ಶೋಭರಾಮ್ (49) ಎಂಬ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ ಐದು ಮಂದಿ ಗಾಯಗೊಂಡಿದ್ದಾರೆ. ಎಸ್‌ಯುವಿಯಲ್ಲಿ ಒಬ್ಬ ಪ್ರಯಾಣಿಕರಿದ್ದರು’ ಎಂದು ಸಬ್ ಇನ್‌ಸ್ಪೆಕ್ಟರ್ ಶ್ರೀರಾಮ್ ಭುರಿಯಾ ಹೇಳಿದ್ದಾರೆ.
ಶನಿವಾರ ರಾತ್ರಿ ಮೊರೆನಾದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಮೊರೆನಾ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಪಿಪಾಲ್ವಾಡಿ ಠಾಣಾ ವ್ಯಾಪ್ತಿಯ ಬಳಿ ಈ ಘಟನೆ ನಡೆದಿದೆ. ಅವಘಡದಲ್ಲಿ ಬಿಶು ಮತ್ತು ಸಚಿನ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಂತೋಷ್ ಎಂಬ ವ್ಯಕ್ತಿ ಚಿಕಿತ್ಸೆ ವೇಳೆ ಸಾವಿಗೀಡಾಗಿದ್ದರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಬಲ್‌ಗಢದ ಸರ್ಕಾರಿ ಆಸ್ಪತ್ರೆಯಿಂದ ಮೊರೆನಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.