ADVERTISEMENT

ಜಾರ್ಖಂಡ್‌ | ಗುಂಡಿನ ಚಕಮಕಿಯಲ್ಲಿ ಓರ್ವ ಮಾವೋವಾದಿ ಹತ್ಯೆ

ಪಿಟಿಐ
Published 23 ಮೇ 2024, 11:02 IST
Last Updated 23 ಮೇ 2024, 11:02 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ರಾಂಚಿ: ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ನಡೆದ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮಾವೋವಾದಿಯೊಬ್ಬನನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿಯಿಂದ ಸುಮಾರು 90 ಕಿ.ಮೀ ದೂರದಲ್ಲಿರುವ ಖುಂಟಿ-ಚೈಬಾಸಾ-ರಾಂಚಿ ಗಡಿಯಲ್ಲಿರುವ ಕಾಡಿನಲ್ಲಿ ಎನ್‌ಕೌಂಟರ್ ನಡೆದಿದೆ.

ADVERTISEMENT

'ಖುಂಟಿ-ಚೈಬಾಸಾ-ರಾಂಚಿ ಗಡಿಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಡಿನ ಕಾಳದಲ್ಲಿ ಮಾವೋವಾದಿ ಗುಂಪಿನ ಪ್ರದೇಶ ಕಮಾಂಡರ್ ಹತ್ಯೆಯಾಗಿದೆ. ಬುಧ್ರಾಮ್ ಮುಂಡಾ ಮೃತ ಪ್ರದೇಶ ಕಮಾಂಡರ್. ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದೆ' ಎಂದು ರಾಂಚಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಅನೂಪ್ ಬಿರ್ತರಾಯ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಮತ್ತು ಜಾರ್ಖಂಡ್ ಪೊಲೀಸರು ಜಂಟಿಯಾಗಿ ಚೈಬಾಸಾ ಕಡೆಯಿಂದ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಮೇ 25 ರಂದು ರಾಂಚಿ, ಗಿರಿಧಿ, ಧನ್‌ಬಾದ್ ಮತ್ತು ಜಮ್‌ಶೆಡ್‌ಪುರ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೂ 2 ದಿನಗಳ ಮೊದಲು ಗುಂಡಿನ ಚಕಮಕಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.