ವಯನಾಡು: ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆಎಸ್‌ಡಿಎಂಎ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ಕಣ್ಣೂರಿನ ರಕ್ಷಣಾ ಭದ್ರತಾ ಪಡೆಗಳು ಸಹ ರಕ್ಷಣಾ ಕಾರ್ಯಗಳಲ್ಲಿ ನೆರವಾಗಲು ವಯನಾಡಿಗೆ ತೆರಳಲು ಸೂಚನೆ ನೀಡಲಾಗಿದೆ.
ಹಲವರು ಭೂಕುಸಿತದಲ್ಲಿ ಸಿಲುಕಿರುವ ಶಂಕೆಯನ್ನು ಇಲ್ಲಿನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಭಾರಿ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.