ಮುಂಬೈ: ಆಂಧ್ರಪ್ರದೇಶದ ‘ದಿಶಾ ಕಾಯ್ದೆ’ ಮಾದರಿಯ ಕಾಯ್ದೆ ಜಾರಿಗೆ ತರಲುಮಹಾರಾಷ್ಟ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು.
ದಿಶಾ ಕಾಯ್ದೆಯಡಿ ಮಹಿಳೆಯರ ಮೇಲಿನ ಅತ್ಯಾಚಾರ, ಆಸಿಡ್ ದಾಳಿ ಮತ್ತಿತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾದ 21 ದಿನಗಳಲ್ಲೇ ಕಠಿಣ ಶಿಕ್ಷೆ ವಿಧಿಸಬಹುದು. ಇದೇ ಮಾದರಿಯ ಶಾಸನವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.