ADVERTISEMENT

ನೀಟ್ ಅಕ್ರಮ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಯಾವತಿ ಆಗ್ರಹ

ಪಿಟಿಐ
Published 21 ಜೂನ್ 2024, 12:30 IST
Last Updated 21 ಜೂನ್ 2024, 12:30 IST
<div class="paragraphs"><p>ಮಾಯಾವತಿ&nbsp;</p></div>

ಮಾಯಾವತಿ 

   

ಲಖನೌ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ‌‌ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಅಮಾಯಕ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಪ್ರಮುಖ ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಇದನ್ನೇ ನೆಪವಾಗಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ' ಎಂದಿದ್ದಾರೆ.

ADVERTISEMENT

ಪ್ರಕರಣದ ಹಿನ್ನೆಲೆ:

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 5ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆ ನಡೆದಿತ್ತು. ಸುಮಾರು 24 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್‌ 14ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ ಎನ್‌ಟಿಎ ಜೂನ್‌ 4ರಂದೇ ಫಲಿತಾಂಶ ಪ್ರಕಟಿಸಿತ್ತು.

ಹರಿಯಾಣದ ಫರೀದಾಬಾದ್‌ನಲ್ಲಿನ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಸೇರಿದಂತೆ, ದೇಶದಾದ್ಯಂತ 67 ಅಭ್ಯರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದು ಅಗ್ರ ಸ್ಥಾನ ಹಂಚಿಕೊಂಡಿದ್ದರು. ಕೆಲ ಅಭ್ಯರ್ಥಿಗಳಿಗೆ ಕೃಪಾಂಕವನ್ನು ಎನ್‌ಟಿಎ ನೀಡಿದ್ದು ಮತ್ತು ಒಂದೇ ಕೇಂದ್ರದ ಕೆಲವರು ಗರಿಷ್ಠ ಅಂಕಗಳನ್ನು ಗಳಿಸಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.