ADVERTISEMENT

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ನವೆಂಬರ್ 2023, 6:57 IST
Last Updated 29 ನವೆಂಬರ್ 2023, 6:57 IST
<div class="paragraphs"><p>ಸಾಮಾ</p></div>
   

ಸಾಮಾ

ಉತ್ತರಕಾಶಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಎಲ್ಲಾ ಕಾರ್ಮಿಕರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ ಉತ್ತರಕಾಶಿಯ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸುತ್ತಿರುವ ದೃಶ್ಯಗಳನ್ನು ಸುದ್ದಿಸಂಸ್ಥೆ ಎಎನ್‌ಐ ಸಾಮಾಜಿಕ ಜಾಲತಾಣ ‘ಎಕ್ಸ್‌‘ನಲ್ಲಿ ಹಂಚಿಕೊಂಡಿದೆ.

ADVERTISEMENT

ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ಮಂಗಳವಾರ ಹೊರತರಲಾಯಿತು. ರಕ್ಷಣಾ ತಂಡ 17 ದಿನಗಳ ಸುದೀರ್ಘ ಕಾರ್ಯಾಚರಣೆ ನಡೆಸಿದೆ.

ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗದ ಕೆಲಭಾಗಗಳು ಕಳೆದ ಭಾನುವಾರ (ನ.12) ಕುಸಿದು, 41 ಕಾರ್ಮಿಕರು ಸಿಲುಕಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.