ADVERTISEMENT

ಪಶ್ಚಿಮ ಬಂಗಾಳ: ವಿದೇಶ ಪ್ರಯಾಣ ಹಿನ್ನೆಲೆಯಿಲ್ಲದ ತರಬೇತಿನಿರತ ವೈದ್ಯಗೆ ಓಮೈಕ್ರಾನ್

ಪಿಟಿಐ
Published 26 ಡಿಸೆಂಬರ್ 2021, 4:05 IST
Last Updated 26 ಡಿಸೆಂಬರ್ 2021, 4:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲ್ಕತ್ತಾ: ಕೋಲ್ಕತ್ತಾ ಮೆಡಿಕಲ್ ಕಾಲೇಜಿನ ತರಬೇತಿನಿರತ ವೈದ್ಯರೊಬ್ಬರಿಗೆ ಓಮೈಕ್ರಾನ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ವೈದ್ಯರನ್ನು ಹೊರತುಪಡಿಸಿ, ಉಳಿದವರು ವಿದೇಶ ಪ್ರಯಾಣದ ಹಿನ್ನೆಲೆಯನ್ನು ಹೊಂದಿದ್ದಾರೆ. ಸೋಂಕಿತರೆಲ್ಲರೂ ಪುರುಷರಾಗಿದ್ದು, ರಾಜ್ಯದಲ್ಲಿ 6 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ವೈದ್ಯರ ಸಂಪರ್ಕಕ್ಕೆ ಬಂದಿದ್ದ ಮೂವರನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದ್ದಾರೆ.

'ವೈದ್ಯಕೀಯ ವೃತ್ತಿಪರರಾಗಿರುವುದರಿಂದ, ರೋಗಿಗಳೊಂದಿಗೆ ಅವರು ಸಂಪರ್ಕಕ್ಕೆ ಬಂದಿರಬಹುದು. ಯಾವುದೇ ದೃಢೀಕರಣವಿಲ್ಲದೆ, ನಾವು ಖಚಿತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಹೀಗಾಗಿ ಈ ಬಗ್ಗೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ' ಎಂದು ಅವರು ಹೇಳಿದರು.

ADVERTISEMENT

ಈ ಮಧ್ಯೆ, ಪಶ್ಚಿಮ ಬಂಗಾಳದಲ್ಲಿ ಶನಿವಾರ 552 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕೋವಿಡ್-19ನಿಂದಾಗಿ 4 ಜನರು ಸಾವಿಗೀಡಾಗಿದ್ದಾರೆ. ಈ ಮೂಲಕ 19,711 ಜನರು ಈವರೆಗೆ ಮೃತಪಟ್ಟಿದ್ದಾರೆ. 24 ಗಂಟೆಗಳಲ್ಲಿ 536 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.