ಶ್ರೀನಗರ (ಪಿಟಿಐ): ‘ನನ್ನನ್ನು ಮತ್ತೊಮ್ಮೆ ಗೃಹ ಬಂಧನದಲ್ಲಿರಿಸಲಾಗಿದೆ’ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಭಾನುವಾರ ಟ್ವೀಟ್ ಮಾಡಿದ್ದಾರೆ.
‘ಉಗ್ರರಿಂದ ಹತ್ಯೆಗೊಳಗಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ನಾನು ಭೇಟಿ ಮಾಡಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ಮಾಡಿದೆ’ ಎಂದಿದ್ದಾರೆ.
‘ಕೇಂದ್ರ ಸರ್ಕಾರದ ಕೆಟ್ಟ ನೀತಿಗಳಿಂದಾಗಿ ಕಾಶ್ಮೀರಿ ಪಂಡಿತರ ಹತ್ಯೆ ಆಗುತ್ತಿದೆ. ನಾವು ಕಾಶ್ಮೀರಿ ಪಂಡಿತರ ಶತ್ರುಗಳು ಎಂದು ಜಗತ್ತಿಗೆ ತೋರಿಸಲು ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ. ಕಾಶ್ಮೀರಿ ಪಂಡಿತರ ಸಂಕಷ್ಟಗಳನ್ನು ಮುಚ್ಚಿಡಲು ಕೇಂದ್ರ ಯತ್ನಿಸುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.
ತಮ್ಮ ಮನೆಯ ಗೇಟ್‌ಗಳಿಗೆ ಬೀಗ ಹಾಕಿರುವ ಮತ್ತು ಮನೆಯ ಮುಂದೆ ಸಿಆರ್‌ಪಿಎಫ್‌ನ ವಾಹನವೊಂದು ನಿಂತಿರುವ ಚಿತ್ರವನ್ನೂ ಅವರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.