ADVERTISEMENT

ಮುಟ್ಟಿನ ಅವಧಿಯ ನೈರ್ಮಲ್ಯ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 15:42 IST
Last Updated 16 ನವೆಂಬರ್ 2024, 15:42 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಶಾಲೆಗೆ ಹೋಗುವ ಹೆಣ್ಣುಮಕ್ಕಳ ಮುಟ್ಟಿನ ಅವಧಿಯ ನೈರ್ಮಲ್ಯ ಕುರಿತ ನೀತಿಯಲ್ಲಿ ಎದ್ದುಕಾಣುವಂತಹ ದೋಷಗಳು ಇವೆ, ವಾಸ್ತವ ಸ್ಥಿತಿಯನ್ನು ಗಮನಿಸದೆಯೇ ನೀತಿಯನ್ನು ರೂಪಿಸಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಜಯಾ ಠಾಕೂರ್ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇದ್ದ ವಿಭಾಗೀಯ ಪೀಠವು, ಸ್ಪಷ್ಟನೆ ನೀಡುವಂತೆ ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರಿಗೆ ಸೂಚನೆ ನೀಡಿತು.

ADVERTISEMENT

ನೀತಿಯನ್ನು ಕೇಂದ್ರ ಸರ್ಕಾರ ರೂಪಿಸಿದೆಯಾದರೂ, ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಬಹಳಷ್ಟು ಕೆಲಸಗಳು ಆಗಬೇಕಿವೆ ಎಂದು ಐಶ್ವರ್ಯಾ ಅವರು ತಿಳಿಸಿದರು.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ತಮ್ಮ ಕ್ರಿಯಾಯೋಜನೆ ಸಿದ್ಧಪಡಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನೆರವಾಗಲಿದೆ. ಇದರಿಂದಾಗಿ ನೀತಿಯನ್ನು ಸರ್ಕಾರಿ ಶಾಲೆಗಳಲ್ಲಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಆಗುತ್ತದೆ ಎಂದು ಐಶ್ವರ್ಯಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.