ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥೆಯಾಗಿದ್ದ 23 ವರ್ಷದ ಯುವತಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಉದಯಪುರ ನಗರದಿಂದ 35 ಕಿ.ಮೀ ದೂರದಲ್ಲಿರುವ ಗೊಗುಂಡದಲ್ಲಿರುವ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ ಯುವತಿಯ ಕುಟುಂಬ ನೀಡಿರುವ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಯುವತಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಭಾನುವಾರ ಸಂಜೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದ್ದು, ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.