ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆಯಲು ಅರ್ಹರಾದವರು ಅರ್ಜಿ ಸಲ್ಲಿಸಲು ವಿದೇಶಾಂಗ ಸಚಿವಾಲಯ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ.
ಆ‍್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. indiancitizenshiponline.nic.in
ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) 2019ರ ಅಡಿಯಲ್ಲಿ ಪೌರತ್ವ ಪಡೆಯಲು ಅರ್ಜಿಗಳನ್ನು ಸಲ್ಲಿಸಲು 'CAA-2019' ಮೊಬೈಲ್ ಅಪ್ಲಿಕೇಶನ್ ಕಾರ್ಯನಿರ್ವಹಿಸುತ್ತಿದೆ’ ವಕ್ತಾರರು ಹೇಳಿದ್ದಾರೆ.
ಈ ಮುಂಚೆ ಸಚಿವಾಲಯ ಅರ್ಜಿ ಸಲ್ಲಿಸಲು ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಿತ್ತು.
'ಪೌರತ್ವ ತಿದ್ದುಪಡಿ ಕಾಯ್ದೆ'ಯಡಿ (ಸಿಎಎ) ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಪೂರ್ವದಲ್ಲಿ ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ಈ ಕಾಯ್ದೆಯು ನೀಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.