ADVERTISEMENT

ಹೊಸ ಕಾನೂನು: ರಾಜ್ಯಗಳ ನೆರವು ಕೋರಿದ ಕೇಂದ್ರ

ಪಿಟಿಐ
Published 2 ಮೇ 2024, 16:11 IST
Last Updated 2 ಮೇ 2024, 16:11 IST
<div class="paragraphs"><p>ಕೇಂದ್ರ ಗೃಹ ಸಚಿವಾಲಯ</p></div>

ಕೇಂದ್ರ ಗೃಹ ಸಚಿವಾಲಯ

   

ನವದೆಹಲಿ: ಜುಲೈ 1ರಿಂದ ದೇಶದ ಎಲ್ಲೆಡೆ ಜಾರಿಗೆ ಬರಲಿರುವ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಭಾಗವಾಗಿ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡುವ ವಿಚಾರದಲ್ಲಿ ರಾಜ್ಯಗಳ ನೆರವು ಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯು ಜುಲೈ 1ರಿಂದ ಜಾರಿಗೆ ಬರಲಿವೆ. ಈ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರವು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ರವಾನಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.