ಮುಂಬೈ: ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಿಲಿಂದ್ದೇವ್ರಾ ಭಾನುವಾರ ಹೇಳಿದ್ದಾರೆ.
ಪಕ್ಷವನ್ನು ಮತ್ತಷ್ಟು ದೃಢಪಡಿಸುವುದಕ್ಕಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯವೆಸಗಲು ಇಚ್ಛಿಸುತ್ತಿರುವುದರಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೇವ್ರಾ ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಈ ವರ್ಷಾಂತ್ಯದಲ್ಲಿ ನಡೆಯಲಿದ್ದು ಅದರ ಹೊಣೆಯನ್ನು ಮೂವರು ಹಿರಿಯ ನಾಯಕರಿಗೆ ವಹಿಸಿಕೊಡುವುದರ ಬಗ್ಗೆ ದೇವ್ರಾ ಚಿಂತನೆ ನಡೆಸಿದ್ದಾರೆ.
ಜೂನ್ 26ರಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ಜತೆ ಸಭೆ ನಡೆಸಿದ ಕೂಡಲೇ ಅಧ್ಯಕ್ಷ ಸ್ಥಾನ ತೊರೆಯುವ ತೀರ್ಮಾನವನ್ನು ದೇವ್ರಾ ವ್ಯಕ್ತಪಡಿಸಿದ್ದರು.
ರಾಜೀನಾಮೆ ವಿಷಯವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ ವೇಣುಗೋಪಾಲ್ ಅವರಿಗೆ ತಿಳಿಸಲಾಗಿದೆ ಎಂದು ಮುಂಬೈ ಕಾಂಗ್ರೆಸ್ ಕಚೇರಿಯ ಪ್ರಕಟಣೆಯಲ್ಲಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.