ನವದೆಹಲಿ:ವಾಣಿಜ್ಯ ವಾಹನಗಳ ಚಾಲನಾ (ಡಿ.ಎಲ್) ಪರವಾನಗಿ ಪಡೆಯಲು ಇದ್ದ ಕನಿಷ್ಠ ವಿದ್ಯಾರ್ಹತೆಯ ಷರತ್ತನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಈ ಹಿಂದೆ ವಾಣಿಜ್ಯ ವಾಹನ ಚಾಲನಾ ಪರವಾನಗಿ ಪಡೆಯಲು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕಿತ್ತು. 1989ರ ಮೋಟಾರು ವಾಹನ ಕಾಯ್ದೆಯ 8ನೇ ನಿಯಮದಲ್ಲಿ ಇದ್ದ ಈ ಷರತ್ತನ್ನು ರದ್ದುಪಡಿಸಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.