ಶ್ರೀನಗರ: ಶ್ರೀನಗರದಲ್ಲಿ ಸೋಮವಾರ ರಾತ್ರಿ ಮೈನಸ್ 3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಕಾಶ್ಮೀರದ ಹವಾಮಾನ ಕೇಂದ್ರ ತಿಳಿಸಿದೆ.
ತೀವ್ರ ಚಳಿಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ದಟ್ಟವಾದ ಮಂಜು ರಸ್ತೆಗಳನ್ನು ಆವರಿಸಿಕೊಂಡಿದ್ದು, ವಾಹನ ಸಂಚಾರ ಕಷ್ಟಕರವಾಗಿದೆ. ಜನರು ವಿಪರೀತ ಚಳಿಯನ್ನು ನಿಭಾಯಿಸಲು ಹೆಣಗಾಡುತ್ತಿದ್ದಾರೆ.
ಡಿಸೆಂಬರ್ 31ರವರೆಗೆ ಮಧ್ಯ ಕಾಶ್ಮೀರ, ಪುಲ್ವಾಮಾ ಮತ್ತು ಬಾರಾಮುಲ್ಲಾದಲ್ಲಿ ದಟ್ಟವಾದ ಮಂಜಿನ ವಾತಾವರಣದೊಂದಿಗೆ ಒಣ ಹವಾಮಾನವು ಮುಂದುವರಿಯಲಿದೆ. ಜನವರಿ 1 ಹಾಗೂ 2ರ ಅವಧಿಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಲಘು ಮಳೆ ಮತ್ತು ಹಿಮ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.