ಭೋಪಾಲ್ : ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಅಡಿಯಲ್ಲಿ ಮಧ್ಯಪ್ರದೇಶದ ಶಾಲಾ ಪಠ್ಯಕ್ರಮದಲ್ಲಿ ಹಿಂದುತ್ವ ಸಿದ್ಧಾಂತದ ಪ್ರತಿಪಾದಕ ವಿ.ಡಿ. ಸಾವರ್ಕರ್ ಅವರ ಪಠ್ಯವನ್ನು ಅಳವಡಿಸಲಾಗುವುದು ಎಂದು ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಗುರುವಾರ ಹೇಳಿದ್ದಾರೆ.
ಸ್ವಾತಂತ್ರ್ಯಾನಂತರ ದೇಶದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್, ಒಂದು ಕುಟುಂಬವನ್ನು ವೈಭವೀಕರಿಸುವತ್ತ ಗಮನ ಹರಿಸಿ ಅನೇಕ ಕ್ರಾಂತಿಕಾರಿಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.
‘ಭಗವಾನ್ ಪರಶುರಾಮ, ಭಗತ್ ಸಿಂಗ್, ರಾಜಗುರು, ಸುಭಾಷ್‌ಚಂದ್ರ ಭೋಸ್ ಕುರಿತ ಪಠ್ಯವನ್ನು ಮತ್ತು ಭಗವದ್ಗೀತೆಯನ್ನು ಪಠ್ಯಕ್ರಮದಲ್ಲಿ ಸೇರಿಸಲಾಗುವುದು’ ಎಂದೂ ತಿಳಿಸಿದ್ದಾರೆ.
‘ವಿಧಾನಸಭೆ ಚುನಾವಣೆ ಹತ್ತಿರವಾಗಿರುವ ಕಾರಣ ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ’ ಎಂದು ಕಾಂಗ್ರೆಸ್‌ನ ಮಧ್ಯಪ್ರದೇಶ ಮಾಧ್ಯಮ ಘಟಕದ ಅಧ್ಯಕ್ಷ ಕೆ.ಕೆ. ಮಿಶ್ರಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.