ADVERTISEMENT

ಬಿಪರ್‌ಜಾಯ್ | ಕೇಂದ್ರದಿಂದ ಗುಜರಾತ್‌ಗೆ ₹338, ಹಿಮಾಚಲಕ್ಕೆ ₹633 ಕೋಟಿ ಪರಿಹಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2023, 10:19 IST
Last Updated 12 ಡಿಸೆಂಬರ್ 2023, 10:19 IST
<div class="paragraphs"><p>ಕೇಂದ್ರ ಗೃಹ ಸಚಿವಾಲಯ</p></div>

ಕೇಂದ್ರ ಗೃಹ ಸಚಿವಾಲಯ

   

ನವದೆಹಲಿ: ಬಿಪರ್‌ಜಾಯ್ ಚಂಡಮಾರುತದಿಂದ ತೀವ್ರ ಹಾನಿಗೊಳಗಾದ ಹಿಮಾಚಲ ಪ್ರದೇಶಕ್ಕೆ ₹633.73 ಕೋಟಿ ಹಾಗೂ ಗುಜರಾತ್‌ಗೆ ₹338.24 ಕೋಟಿ ಆರ್ಥಿಕ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ಈ ವರ್ಷದ ನೈರುತ್ಯ ಮಾನ್ಸೂನ್ ಸಮಯದಲ್ಲಿ ಪ್ರವಾಹ, ಮೇಘಸ್ಫೋಟ ಮತ್ತು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ಹಿಮಾಚಲ ಪ್ರದೇಶಕ್ಕೆ ರಾಷ್ಟ್ರೀಯ ವಿಪತ್ತು ನಿಧಿಯಿಂದ ₹633.73 ಕೋಟಿ ಹೆಚ್ಚುವರಿ ನೆರವು ನೀಡುವುದಕ್ಕೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ.

ADVERTISEMENT

ಆದೇ ರೀತಿ ಬಿಪರ್‌ಜಾಯ್ ಚಂಡಮಾರುತದಿಂದ ಹಾನಿಗೊಳಗಾದ ಗುಜರಾತ್‌ಗೆ ₹338.24 ಕೋಟಿ ಆರ್ಥಿಕ ನೆರವು ಒದಗಿಸುವುದಾಗಿಯೂ ಗೃಹ ಸಚಿವಾಲಯ ತಿಳಿಸಿದೆ.

ಚಂಡಮಾರುತದಿಂದಾಗಿ ಹಿಮಾಚಲ ಪ್ರದೇಶ, ಗುಜರಾತ್‌, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಭೂಕುಸಿತ ಹಾಗೂ ಮಳೆ ಸಂಬಂಧಿತ ಅವಘಡಗಳಲ್ಲಿ ಭಾರಿ ಪ್ರಮಾಣದ ಆಸ್ತಿ -ಪಾಸ್ತಿ ನಷ್ಟವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.