ನವದೆಹಲಿ: ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವನ್ನು (ಎಂಎಚ್‌ಆರ್‌ಡಿ) ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಹೊಸ ಶಿಕ್ಷಣ ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಅದರ ವಿವರಗಳನ್ನು ಇಂದು(ಬುಧವಾರ) ಪ್ರಕಟಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು 1986ರಲ್ಲಿ ರೂಪಿಸಲಾಗಿದ್ದು, 1992ರಲ್ಲಿ ಮಾರ್ಪಾಡುಮಾಡಲಾಯಿತು. ಅದು ಜಾರಿಗೆ ಬಂದ ಸುಮಾರು ಮೂರು ದಶಕಗಳ ನಂತರ ಹೊಸ ಶಿಕ್ಷಣ ನೀತಿಗೆ ಅನುಮೋದನೆ ನೀಡಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯ ಹೇಳಿದೆ.
ಶಿಕ್ಷಣದಲ್ಲಿ ಏಕರೂಪತೆ ತರುವುದು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸುಧಾರಿಸುವತ್ತ ಗಮನಹರಿಸುವುದು ಹೊಸ ನೀತಿಯ ಗುರಿಯಾಗಿದೆ.
ಹೊಸ ಶಿಕ್ಷಣ ನೀತಿಯಲ್ಲಿ ಬಹು ಭಾಷೆ, ನವ ಕೌಶಲ್ಯ, ಕ್ರೀಡೆ, ಕಲೆಗಳ ಏಕೀಕರಣ ಮತ್ತು ಪರಿಸರ ಕೇಂದ್ರಿತ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ ಎಂದು ಸಚಿವಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.