ADVERTISEMENT

ದೇಶ ವಿರೋಧಿ ಆರೋಪ: 20 ಯೂಟ್ಯೂಬ್ ಚಾನೆಲ್‌, 2 ವೆಬ್‌ಸೈಟ್‌ಗಳಿಗೆ ನಿರ್ಬಂಧ

ಪಿಟಿಐ
Published 21 ಡಿಸೆಂಬರ್ 2021, 15:42 IST
Last Updated 21 ಡಿಸೆಂಬರ್ 2021, 15:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಗುಪ್ತಚರ ಸಂಸ್ಥೆಗಳ ಮಾಹಿತಿ ಮೇರೆಗೆ ಭಾರತ ವಿರೋಧಿ ಪ್ರಚಾರ ಮತ್ತು ನಕಲಿ ಸುದ್ದಿಗಳನ್ನು ಹರಡುತ್ತಿರುವ ಕಾರಣ 20 ಯೂಟ್ಯೂಬ್ ಚಾನೆಲ್‌ಗಳು ಮತ್ತು ಎರಡು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಆದೇಶಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಈ ಕುರಿತು ಸಚಿವಾಲಯವು ಸೋಮವಾರ ಆದೇಶ ಹೊರಡಿಸಿದೆ. ಈ ಯೂಟ್ಯೂಬ್‌ ಚಾನೆಲ್‌ಗಳು ಮತ್ತು ವೆಬ್‌ಸೈಟ್‌ಗಳು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುವ ಮಾಹಿತಿ ಜಾಲಕ್ಕೆ ಸೇರಿವೆ. ಭಾರತಕ್ಕೆ ಸಂಬಂಧಿಸಿದ ವಿವಿಧ ಸೂಕ್ಷ್ಮ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

ಕಾಶ್ಮೀರ, ಸೇನೆ, ಭಾರತದಲ್ಲಿನ ಅಲ್ಪಸಂಖ್ಯಾತ ಸಮುದಾಯಗಳು, ರಾಮಮಂದಿರ, ಜನರಲ್ ಬಿಪಿನ್ ರಾವತ್ ಮುಂತಾದ ವಿಷಯಗಳ ಕುರಿತು ತಪ್ಪು ಮಾಹಿತಿ ನೀಡುವ ಪೋಸ್ಟ್ ಮಾಡಲು ಚಾನೆಲ್‌ಗಳನ್ನು ಬಳಸಲಾಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.