ಶಹಜಹಾನ್ಪುರ: ದಲಿತ ಸಮುದಾಯಕ್ಕೆ ಸೇರಿದ ಬಾಲಕಿಯ ಮೇಲೆ ಆಕೆಯದೇ ಊರಿನ ಮೂರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಮನೆಯ ಸಮೀಪವೇ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜಲಾಲಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮನೆ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ 16 ವರ್ಷದ ಬಾಲಕಿಯನ್ನು, ಬಲವಂತವಾಗಿ ಇನ್ನೊಂದು ಗದ್ದೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲಾಗಿದೆ. ವೀರ್ಭನ್, ಪ್ರಮೋದ್ ಹಾಗೂ ಸೋನೆ ಎಂಬವರು ಈ ಕೃತ್ಯ ಎಸಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ) ಸಂಜೀವ್ ಕುಮಾರ್ ಬಾಜಪೇಯಿ ತಿಳಿಸಿದ್ದಾರೆ.
ಬಾಲಕಿಯ ಚೀರಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಕೃತ್ಯ ಎಸಗಿಗದವರು ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.