ನವದೆಹಲಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಶುಕ್ರವಾರದಿಂದ ಎರಡು ದಿನಗಳ ಭೂತಾನ್ ಪ್ರವಾಸ ಕೈಗೊಂಡಿದ್ದಾರೆ.
ಈ ಹುದ್ದೆಗೇರಿದ ನಂತರ ಅವರು ಕೈಗೊಳ್ಳುತ್ತಿರುವ ಮೊದಲ ವಿದೇಶ ಪ್ರವಾಸ ಇದಾಗಿದೆ.
‘ಮಿಸ್ರಿ ಅವರು ಭೂತಾನ್ ರಾಜಧಾನಿ ಥಿಂಪುವಿನಲ್ಲಿ ಪ್ರಧಾನಿ ಶೆರಿಂಗ್ ತೊಬ್ಗೆ, ವಿದೇಶಾಂಗ ಸಚಿವ ಡಿ.ಎನ್ ಧುಂಗ್ಯೆಲ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಪೆಮಾ ಚೊಡೆನ್ ಅವರನ್ನು ಭೇಟಿ ಮಾಡುವರು’ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
‘ಅಭಿವೃದ್ಧಿ, ಸಹಕಾರ ಕುರಿತಂತೆ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಮಾತುಕತೆ ನಡೆಸುವರು’ ಎಂದೂ ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.