ADVERTISEMENT

ಮಿಷನ್‌ ಮಹಿಳಾ ಸಾರಥಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಯೋಗಿ ಆದಿತ್ಯನಾಥ್‌

ಪಿಟಿಐ
Published 22 ಅಕ್ಟೋಬರ್ 2023, 11:00 IST
Last Updated 22 ಅಕ್ಟೋಬರ್ 2023, 11:00 IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌   

ಅಯೋಧ್ಯಾ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಹಿಳಾ ಬಸ್‌ ಚಾಲಕಿಯರನ್ನು ಉತ್ತೇಜಿಸುವ ಸಲುವಾಗಿ 51 ಬಸ್ಸುಗಳಿಗೆ ಹಸಿರು ನಿಶಾನೆ ತೋರಿ ‘ಮಿಷನ್‌ ಮಹಿಳಾ ಸಾರಥಿ‘ ಕಾರ್ಯಕ್ರಮವನ್ನು ಉದ್ಟಾಟಿಸಿದ್ದಾರೆ.

ಅಯೋಧ್ಯೆ ನಗರದಲ್ಲಿ ಹಮ್ಮಿಕೊಂಡಿದ್ದ ‘ಮಿಷನ್‌ ಮಹಿಳಾ ಸಾರಥಿ‘ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜದಲ್ಲಿ ಮಹಿಳೆಯರನ್ನು ಗೌರವಿಸುವುದು ಹಾಗೂ ಅವರ ಘನತೆಯನ್ನು ಕಾಪಡುವುದು ಮುಖ್ಯ. ಮಹಿಳೆಯರು ಸ್ವಾಲಂಬಿಗಳಾಗಿ ಜೀವನ ನಡೆಸಲು ಪ್ರಾರಂಭಿಸಿದರೆ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಣಲು ಅನುಕೂಲವಾಗಲಿದೆ ಎಂದು ಆದಿತ್ಯನಾಥ್‌ ಅಭಿಪ್ರಾಯಪಟ್ಟರು.

ರಾಜ್ಯ ಸಾರಿಗೆ ನಿಗಮಗಳಲ್ಲಿನ 51 ಬಸ್‌ಗಳಿಗೆ ಮಹಿಳಾ ಚಾಲಕಿಯರು ಹಾಗೂ ನಿರ್ವಾಹಕರನ್ನು ನೇಮಿಸಿದ್ದಾರೆ. ಈ ಮೂಲಕ ಮಹಿಳೆಯರು ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಸೀಮಿತ ಎನ್ನುವ ಪರಿಕ‍ಲ್ಪನೆ ಹೋಗಲಾಡಿಸಬೇಕು. ರಾಜ್ಯದಲ್ಲಿ ಪೊಲೀಸ್‌ ಹುದ್ದೆಗಳು ಸೇರಿದಂತೆ ಇತರ ಇಲಾಖೆಗಳಲ್ಲಿ ಒಟ್ಟು 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು

ADVERTISEMENT

ಈ ನಡುವೆ ಅಯೋಧ್ಯೆಯ ಛೋಟಿ ದೇವಕಾಳಿ ದೇವಸ್ಥಾನಕ್ಕೆ ತೆರಳಿ ಯೋಗಿ ಆದಿತ್ಯನಾಥ್‌ ಅವರು ಪ್ರಾರ್ಥನೆ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.