ADVERTISEMENT

Aditya L1: ಇನ್ನೂ ಎತ್ತರದ ಕಕ್ಷೆ ಸೇರಿದ ಆದಿತ್ಯ ಎಲ್-1

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2023, 2:31 IST
Last Updated 10 ಸೆಪ್ಟೆಂಬರ್ 2023, 2:31 IST
<div class="paragraphs"><p>ಚಿತ್ರ ಕೃಪೆ: X/@<a href="https://twitter.com/isro">@isro</a></p></div>

ಚಿತ್ರ ಕೃಪೆ: X/@@isro

   

ಬೆಂಗಳೂರು: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಹತ್ವಾಕಾಂಕ್ಷೆಯ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಇನ್ನೂ ಎತ್ತರದ ಕಕ್ಷೆಗೆ ಏರಿಸುವ ಮೂರನೇ ಪ್ರಕ್ರಿಯೆ ಯಶಸ್ವಿಯಾಗಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ADVERTISEMENT

ಈಗ ಆದಿತ್ಯ ಭೂಮಿಯಿಂದ 296 ಕಿ.ಮೀ. x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು, ಮಾರಿಷಸ್, ಎಸ್‌ಡಿಎಸ್‌ಸಿ-ಎಸ್‌ಎಚ್ಎಆರ್ ಮತ್ತು ಪೋರ್ಟ್ ಬ್ಲೇರ್‌ನಲ್ಲಿರುವ ಇಸ್ರೊ ಕೇಂದ್ರಗಳಲ್ಲಿ ಟ್ರ್ಯಾಕ್ ಮಾಡಲಾಗಿದೆ.

ಮುಂದಿನ (ನಾಲ್ಕನೇ) ಹಂತದ ಕಕ್ಷೆ ಬದಲಾವಣೆ ಸೆಪ್ಟೆಂಬರ್ 15ರಂದು ನಿಗದಿಯಾಗಿದೆ.

ಸೆಪ್ಟೆಂಬರ್ 2ರಂದು ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.

ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ ಎಲ್-1 ಅಂತರಿಕ್ಷ ವೀಕ್ಷಣಾಲಯವನ್ನು ಇರಿಸಲಾಗುವುದು. 125 ದಿನಗಳಲ್ಲಿ ಎಲ್-1 ಬಿಂದುವಿಗೆ ಸೇರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.