ADVERTISEMENT

Mizoram Assembly Election Results 2023: ಮತ ಎಣಿಕೆ ಡಿ.4ಕ್ಕೆ ಮುಂದೂಡಿಕೆ

ಪಿಟಿಐ
Published 1 ಡಿಸೆಂಬರ್ 2023, 15:50 IST
Last Updated 1 ಡಿಸೆಂಬರ್ 2023, 15:50 IST
<div class="paragraphs"><p>(ಪ್ರಾತಿನಿಧಿಕ ಚಿತ್ರ)</p></div>

(ಪ್ರಾತಿನಿಧಿಕ ಚಿತ್ರ)

   

ನವದೆಹಲಿ: ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆಯನ್ನು ಡಿಸೆಂಬರ್ 3ರಿಂದ ಡಿಸೆಂಬರ್ 4ಕ್ಕೆ ಮುಂದೂಡಲಾಗಿದೆ (ಭಾನುವಾರದಿಂದ ಸೋಮವಾರ) ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ಕ್ರೈಸ್ತ ಸಮುದಾಯವರು ಹೆಚ್ಚಿನ ಸಂಖ್ಯೆಯಲ್ಲಿರುವ ಮಿಜೋರಾಂ ರಾಜ್ಯದಲ್ಲಿ ಭಾನುವಾರ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಈ ದಿನ ವಿಶೇಷ ಪ್ರಾರ್ಥನೆ ನಡೆಯಲಿದೆ.

ADVERTISEMENT

ಈ ಸಂಬಂಧ ವಿವಿಧ ವಲಯಗಳಿಂದ ಬಂದ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

40 ಸ್ಥಾನಗಳ ಮಿಜೋರಾಂ ವಿಧಾನಸಭೆಗೆ ನವೆಂಬರ್‌ 7ರಂದು ಮತದಾನ ನಡೆದಿತ್ತು. ಬಹುತೇಕ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಮಿಜೋರಾಂನಲ್ಲಿ ಅತಂತ್ರ ಫಲಿತಾಂಶ ದಾಖಲಾಗಲಿದೆ.

ಪಂಚರಾಜ್ಯಗಳ ಪೈಕಿ ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣದಲ್ಲಿ ಡಿಸೆಂಬರ್ 3ರಂದೇ ಫಲಿತಾಂಶ ಹೊರಬೀಳಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.