ಐಜ್ವಾಲ್: ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಉಪಮುಖ್ಯಮಂತ್ರಿ ಮತ್ತು ಆಡಳಿತಾರೂಢ ಎಂಎನ್‌ಎಫ್ ಪಕ್ಷದ ಅಭ್ಯರ್ಥಿ ತೌನ್ಲುಯಾ ಅವರು ಜೆಡ್‌ಪಿಎಂ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್)ನ ತೌನ್ಲುಯಾ 6,079 ಮತಗಳನ್ನು ಪಡೆದರೆ, ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಜೆಡ್‌ಪಿಎಂ) ಅಭ್ಯರ್ಥಿ ಡಬ್ಲ್ಯೂ ಚುವಾನವ್ಮಾ 6,988 ಮತಗಳನ್ನು ಪಡೆದರು.
ಕಾಂಗ್ರೆಸ್ ಅಭ್ಯರ್ಥಿ ಸಿ ಲಾಲ್ಹ್ರಿಯಾತುಯಾ 1,674 ಮತಗಳನ್ನು ಪಡೆದರೆ, ಸ್ವತಂತ್ರ ಅಭ್ಯರ್ಥಿ ಲಾಲ್‌ಮುನ್ಸಿಯಾಮಿ ಕೇವಲ 67 ಮತಗಳನ್ನು ಪಡೆದರು ಎಂದು ಚುನಾವಣಾ ಆಯೋಗ ತಿಳಿಸಿದೆ.
ಬಿಗಿ ಭದ್ರತೆಯ ನಡುವೆ ಸೋಮವಾರ ಬೆಳಗ್ಗೆ 8 ಗಂಟೆಗೆ ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.
ರಾಜ್ಯಾದ್ಯಂತ 13 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಎಚ್.ಲಿಯಾಂಜೆಲಾ ಪಿಟಿಐಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.