ADVERTISEMENT

ಕೆಲಸದ ಒತ್ತಡ: ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MNC ಉದ್ಯೋಗಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮಾರ್ಚ್ 2024, 11:17 IST
Last Updated 17 ಮಾರ್ಚ್ 2024, 11:17 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ಮಹಾರಾಷ್ಟ್ರದ ಮಾತುಂಗ ಪ್ರದೇಶದಲ್ಲಿರುವ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವಕನೊಬ್ಬ ಕೆಲಸದ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಆಕಸ್ಮಿಕ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ADVERTISEMENT

ಮೃತ ಯುವಕನನ್ನು ಸೌರಭ್ ಕುಮಾರ್ ಲಡ್ಡಾ ಎಂದು ಗುರುತಿಸಲಾಗಿದೆ. ಆತ ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಸೌರಭ್ ಕುಮಾರ್ ಪೋಷಕರು ಪುಣೆಯಲ್ಲಿ ನೆಲೆಸಿದ್ದಾರೆ.

ಸೌರಭ್ ಅವರು ಐಐಎಂನಲ್ಲಿ ಎಂಬಿಎ ಹಾಗೂ ಐಐಟಿಯಲ್ಲಿ ರಾಸಾಯನಿಕ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದರು. ಬಳಿಕ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೌರಭ್ ಅವರು ಸ್ನೇಹಿತರು ಮತ್ತು ಗೆಳತಿಯೊಂದಿಗೆ ವಾಟ್ಸ್‌ಆ್ಯಪ್‌ನಲ್ಲಿ ಚಾಟಿಂಗ್ ಮಾಡಿದ್ದು, ಕಂಪನಿಯಲ್ಲಿ ಅನುಭವಿಸುತ್ತಿದ್ದ ಕೆಲಸದ ಒತ್ತಡ ಬಗ್ಗೆ ಹೇಳಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಸೌರಭ್ ಅವರ ಪೋಷಕರು, ಅಪಾರ್ಟ್‌ಮೆಂಟ್‌ ನಿವಾಸಿಗಳು ಹಾಗೂ ಆತ ಕೆಲಸ ಮಾಡುತ್ತಿದ್ದ ಕಂಪನಿಯ ಸಹೋದ್ಯೋಗಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.