ADVERTISEMENT

ಮಣಿಪುರ: ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಅಂತರ್ಜಾಲ ಸೇವೆ ನಿಷೇಧ ತೆರವು

ಪಿಟಿಐ
Published 9 ನವೆಂಬರ್ 2023, 4:39 IST
Last Updated 9 ನವೆಂಬರ್ 2023, 4:39 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಂಫಾಲ: ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಮಣಿಪುರದ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಅಂತರ್ಜಾಲ ಸೇವೆ ನಿಷೇಧವನ್ನು ಸರ್ಕಾರವು ತೆರವುಗೊಳಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಪ್ರಯೋಗಾರ್ಥವಾಗಿ ನಾಗಾ ಬಹುಸಂಖ್ಯಾತ ಉಖ್ರುಲ್, ಸೇನಾಪತಿ, ಚಂಧೇಲ್ ಮತ್ತು ತಮೆಂಗ್‌ಲೊಂಗ್ ಜಿಲ್ಲಾ ಕೇಂದ್ರಗಳಲ್ಲಿ ಇಂಟರ್‌ನೆಟ್ ನಿಷೇಧ ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಯೋಗಾರ್ಥವಾಗಿ ಮೊಬೈಲ್ ಟವರ್ ಕಾರ್ಯಗತಗೊಳಿಸುವಂತೆ ಮಣಿಪುರದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಹಿಂಸಾಚಾರ ಪೀಡಿತವಲ್ಲದ ಕಣಿವೆ ರಾಜ್ಯದ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಮರುಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ ಮೇ 3ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಇಲ್ಲಿಯವರೆಗೆ 180ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.