ನವದೆಹಲಿ: ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಕಳೆದ ಶನಿವಾರ ಅರುಣ್ ಜೇಟ್ಲಿ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದರು. ಈ ವೇಳೆ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಜಿ–7 ಶೃಂಗಸಭೆ ಸೇರಿದಂತೆ ಫ್ರಾನ್ಸ್, ಬಹರೇನ್ ಮತ್ತು ಯುಎಇ ದೇಶಗಳಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರಲಿಲ್ಲ. ಪ್ರಧಾನಿ ಮೋದಿ ಸೋಮವಾರ ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸಾಗಿದ್ದಾರೆ.
ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಜೇಟ್ಲಿ ನಿವಾಸಕ್ಕೆ ಭೇಟಿ ನೀಡಿದ ಮೋದಿ ಅವರ ಕುಟುಂಬ ವರ್ಗದವರೊಂದಿಗೆ ಮಾತನಾಡಿ ಸಾಂತ್ವ ಹೇಳಿದರು. ಈ ವೇಳೆ ಜೇಟ್ಲಿ ಅವರ ಪತ್ನಿ, ಪುತ್ರಿ ಹಾಗೂ ಕುಟುಂಬ ಸದಸ್ಯರು ಇದ್ದರು.
ಪ್ರಧಾನಿ ಅವರ ಜೊತೆಯಲ್ಲಿ ಗೃಹಸಚಿವ ಅಮಿತ್ ಶಾ ಕೂಡ ಇದ್ದರು.ಜೇಟ್ಲಿ ಪುತ್ರ ರೋಹನ್ ಜೊತೆ ಮೋದಿ ಅರ್ಧ ಗಂಟೆಗಳ ಕಾಲ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.