ADVERTISEMENT

ಪಾಕಿಸ್ತಾನಿಗಳಿಗೆ ಭಾರತೀಯ ಪೌರತ್ವ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಲಿ: ಮೋದಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 12:23 IST
Last Updated 17 ಡಿಸೆಂಬರ್ 2019, 12:23 IST
   

ಬರ್ಹೆಟ್‌ (ಜಾರ್ಖಂಡ್): ಕಾಂಗ್ರೆಸ್‌ ಪಕ್ಷಕ್ಕೆ ಧೈರ್ಯವಿದ್ದರೆ ಪ್ರತಿ ಪಾಕಿಸ್ತಾನ ಪ್ರಜೆಗೂ ಭಾರತೀಯ ಪೌರತ್ವ ನೀಡುವುದಾಗಿ ಘೋಷಿಸಲಿ ಎಂದು ಪ್ರಧಾನಿ ಮೋದಿ ಸವಾಲು ಎಸೆದಿದ್ದಾರೆ.

ಜಾರ್ಖಂಡ್‌ನ ಬರ್ಹೆಟ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ದೇಶದ ಮುಸ್ಲಿಮರ ನಡುವೆ ಭಯ ಹರಡುವ ಕೆಲಸವನ್ನು ವಿರೋಧ ಪಕ್ಷ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳಿಗೆ ಬಹಿರಂಗ ಸವಾಲು ಎಸೆದಿರುವ ಮೋದಿ, ‘ಅವರಿಗೆ ಧೈರ್ಯವಿದ್ದರೆ ಪಾಕಿಸ್ತಾನಿ ಪ್ರಜೆಗಳಿಗೆ ಭಾರತೀಯ ಪೌರತ್ವ ನೀಡುವುದಾಗಿ ಘೋಷಿಸಲಿ. ಜಮ್ಮು–ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರು ಸ್ಥಾಪಿಸುತ್ತೇವೆ ಎಂದು ಹೇಳಲಿ‘ ಎನ್ನುವ ಮೂಲಕ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

‘ಸುಳ್ಳು ಮತ್ತು ಭಯಗಳನ್ನು ಹರಡುವ ಮೂಲಕ ಕಾಂಗ್ರೆಸ್‌ ಪಕ್ಷವು ರಾಜಕೀಯ ಮಾಡಲು ಹೊರಟಿದೆ. ನಾವು ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಯಾವುದೇ ಭಾರತೀಯ ನಾಗರಿಕನ ಮೇಲೆ ಪರಿಣಾಮ ಬೀರುವುದಿಲ್ಲ‘ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.