ನವದೆಹಲಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ದೊರಕಿರುವ 71 ಸಾವಿರ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಂದು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಜೊತೆಗೆ, ಈ ಎಲ್ಲರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
ದೇಶದ 45 ವಿವಿಧ ಸ್ಥಳಗಳಲ್ಲಿ ಈ ‘ಉದ್ಯೋಗ ಮೇಳ’ ನಡೆಯಲಿದೆ. ಕೇಂದ್ರಾಡಳಿತ ಪ್ರದೇಶಗಳು, ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಹುದ್ದೆಗಳಲ್ಲಿ ಕೆಲವಕ್ಕೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.