ನವದೆಹಲಿ:‘ಫ್ಯಾಕ್ಟ್ ಚೆಕ್’ ವೆಬ್‌ಸೈಟ್ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ 2018ರ ಟ್ವೀಟ್ ಪ್ರಕರಣದಲ್ಲಿ ಪಟಿಯಾಲ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
ವೈಯಕ್ತಿಕ ಬಾಂಡ್ ₹50,000 ಆಧಾರದಲ್ಲಿ ಜಾಮೀನು ನೀಡಲಾಗಿದೆ. ಆದರೆ, ನ್ಯಾಯಾಲಯದ ಅನುಮತಿ ಪಡೆಯದೆ ವಿದೇಶಕ್ಕೆ ತೆರಳುವಂತಿಲ್ಲ ಎಂದು ಸೂಚಿಸಿದೆ.
ಹಿಂದೂ ದೇವರ ಕುರಿತು 2018ರಲ್ಲಿ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ ಪ್ರಕರಣ ಇದಾಗಿದೆ. ಜೂನ್ 27ರಂದು ದೆಹಲಿ ಪೊಲೀಸರು ಜುಬೈರ್ ಅವರನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.