ADVERTISEMENT

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ಪಿಟಿಐ
Published 10 ಏಪ್ರಿಲ್ 2024, 4:43 IST
Last Updated 10 ಏಪ್ರಿಲ್ 2024, 4:43 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದಾರೆ.

ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇ.ಡಿಯಿಂದ ಬಂಧಿತರಾಗಿರುವ ಕೇಜ್ರಿವಾಲ್, ತಮ್ಮನ್ನು ಬಂಧಿಸಿದ ಕ್ರಮವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್, ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ಪರ ವಕೀಲ ವಿವೇಕ್ ಜೈನ್, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.