ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕಾರ್ಪೊರೇಟ್ ಮಧ್ಯವರ್ತಿ ದೀಪಕ್ ತಲ್ವಾರ್, ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹಿಂಪಡೆದಿದ್ದಾರೆ.
‘ಜ.30ರಿಂದ ನನ್ನನ್ನು ಬಂಧನದಲ್ಲಿ ಇರಿಸಿರುವುದು ಅಕ್ರಮ. ಅಧಿಕಾರಿಗಳಿಂದ ನನ್ನ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಉಲ್ಲೇಖಿಸಿ ಅವರು ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಸಿದ್ದರು. ಆದರೆ ತಲ್ವಾರ್ ಪರ ವಕೀಲ ತನ್ವೀರ್ ಅಹ್ಮದ್ ಮಿರ್, ಈ ಅರ್ಜಿ ಹಿಂಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆಸುಪ್ರೀಂ ಕೋರ್ಟ್ ಈಚೆಗೆ ನೀಡಿದ್ದ ತೀರ್ಪೊಂದನ್ನು ಸಹ ಇದರ ಜತೆ ಉಲ್ಲೇಖಿಸಿದ್ದಾರೆ.
ಬಂಧನಕ್ಕೆ ಸಂಬಂಧಿಸಿದ ಕಾನೂನಾತ್ಮಕ ವಿಷಯ ಹಾಗೂ ವಾಸ್ತವಾಂಶಗಳನ್ನು ಉಲ್ಲೇಖಿಸಿ ವಿಚಾರಣಾ ನ್ಯಾಯಾಲಯದಲ್ಲಿಜಾಮೀನು ಅರ್ಜಿ ಸಲ್ಲಿಸಲಾಗುವುದು ಎಂದು ಮಿರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.