ಬೆಂಗಳೂರು: ವಿದೇಶಗಳಲ್ಲಿ ಕಾಣಿಸಿಕೊಂಡು ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಅಥವಾ ಮಂಗನ ಸಿಡುಬು ಖಾಯಿಲೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಚ್ಚರಿಯ ಮಾಹಿತಿಯೊಂದನ್ನು ನೀಡಿದೆ.
ಹೌದು, ಕಳೆದ ಶನಿವಾರವಷ್ಟೇ ವಿಶ್ವ ಆರೋಗ್ಯ ಸಂಸ್ಥೆ, ‘ಮಂಕಿಪಾಕ್ಸ್ ಆರೋಗ್ಯ ತುರ್ತುಸ್ಥಿತಿಯಲ್ಲ ಎಂದು ಹೇಳಿತ್ತು. ಆದರೆ, ಈಗ ಮಂಕಿಪಾಕ್ಸ್ ನಾನಾ ರಾಷ್ಟ್ರಗಳಲ್ಲಿ ಸದ್ದು ಮಾಡುತ್ತಿರುವುದರಿಂದಆರೋಗ್ಯ ತುರ್ತುಸ್ಥಿತಿಯಲ್ಲ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಬೇಕಾಗಿದೆ’ ಎಂದು ಡಬ್ಲ್ಯುಎಚ್‌ಒ ಹೇಳಿದೆ.
ಸುಮಾರು 50ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ವರ್ಷ 3,200ಕ್ಕಿಂತ ಅಧಿಕ ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ಡಬ್ಲ್ಯುಎಚ್‌ಒಗೆ ವರದಿಯಾಗಿದೆ.
ಈ ಹಿನ್ನೆಲೆಯಲ್ಲಿಡಬ್ಲ್ಯುಎಚ್‌ಒ ಮತ್ತೊಂದು ಅಚ್ಚರಿ ಮಾಹಿತಿ ನೀಡಿದ್ದು, ಮಂಕಿಪಾಕ್ಸ್ ಕಂಡು ಬಂದಿರುವವರು ಬಹುತೇಕರು ಮಧ್ಯವಯಸ್ಸಿನವರಾಗಿದ್ದಾರೆ. ಅಲ್ಲದೇ ಇವರಲ್ಲಿ ಬಹುತೇಕರು ಪುರುಷರೇ ಆಗಿದ್ದಾರೆ. ಇನ್ನೂ ವಿಚಿತ್ರವೆಂದರೆ ಈ ಖಾಯಿಲೆ ಕಾಣಿಸಿಕೊಂಡ ಪ್ರತಿ ಐವರಲ್ಲಿ ಮೂವರು, ಪುರುಷ ಮತ್ತು ಪುರುಷ ಲೈಂಗಿಕ ಸಂಪರ್ಕ ಮಾಡಿರುವವರು ಎಂದುಡಬ್ಲ್ಯುಎಚ್‌ಒ ಹೇಳಿರುವುದನ್ನು ಎನ್‌ಡಿಟಿವಿ ವರದಿ ಮಾಡಿದೆ.
'ಮಂಕಿಪಾಕ್ಸ್' ಪ್ರಕರಣಗಳು ಏರಿಕೆಯಾಗುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮುಖ್ಯಸ್ಥ ಟೆಡ್ರೋಸ್ಗೆಬ್ರೇಯೇಸಸ್ ಕಳವಳ ವ್ಯಕ್ತಪಡಿಸಿದ್ದು, ಸದ್ಯ ಈ ಸೋಂಕು ಆರೋಗ್ಯ ತುರ್ತುಸ್ಥಿತಿಯಲ್ಲ ಎಂದು ಶನಿವಾರ ಹೇಳಿದ್ದರು.
ಪಶ್ಚಿಮ ಮತ್ತು ಮಧ್ಯ ಆಫ್ರಿಕಾ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ 'ಮಂಕಿಪಾಕ್ಸ್' ಪ್ರಕರಣಗಳು ಮೇ ತಿಂಗಳಿನಿಂದ ಈಚೆಗೆ ಇತರ ದೇಶಗಳಲ್ಲಿಯೂ ಉಲ್ಬಣಗೊಂಡಿವೆ. ಹೆಚ್ಚಾಗಿಪಶ್ಚಿಮ ಯುರೋಪ್‌ನಲ್ಲಿ ಪತ್ತೆಯಾಗುತ್ತಿವೆ.
ದುಬೈಯಿಂದ ಬಂದಿದ್ದ ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆಯಷ್ಟೇ ‘ಮಂಕಿಪಾಕ್ಸ್’ ತಗುಲಿರುವುದು ಭಾರತದಲ್ಲಿ ಖಾತರಿಯಾಗಿತ್ತು. ದೇಶದಲ್ಲಿ ಪತ್ತೆಯಾದ ಎರಡನೇ ಪ್ರಕರಣ ಇದಾಗಿದೆ.ಇದಕ್ಕೂ ಮುನ್ನ ಕೇರಳದ ಕೊಲ್ಲಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ದೃಢಪಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.