ನವದೆಹಲಿ: ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಜೂನ್ 1ರಂದೇ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ.
ಜೂನ್ 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಐಎಂಡಿಮೇ 15ರಂದು ತಿಳಿಸಿತ್ತು. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಮುಂಗಾರು ಮಾರುತಗಳು ಚುರುಕಾಗಿವೆ ಎಂದು ಐಎಂಡಿ ತಿಳಿಸಿದೆ.
‘ಅರಬ್ಬಿ ಸಮುದ್ರದಲ್ಲಿ ಮೇ 31ರಿಂದ ಜೂನ್ 4ರವರೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದ್ದು, ಇದು ನೈರುತ್ಯ ಮುಂಗಾರು ಮಾರುತಗಳ ಪ್ರವೇಶಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಿದೆ. ಈ ವರ್ಷ ಮುಂಗಾರಿನಲ್ಲಿ ವಾಡಿಕೆ ಮಳೆಯಾಗಲಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.